1 Samuel 18:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನ ಅಧಿಕಾರಿಗಳು ಆ ಸಂಗತಿಗಳನ್ನು ದಾವೀದನಿಗೆ ತಿಳಿಸಿದರು. ದಾವೀದನು ರಾಜನ ಅಳಿಯನಾಗಬೇಕೆಂದು ಬಯಸಿದನು. ಆದ್ದರಿಂದ ಅವನು ತಕ್ಷಣವೇ ಕಾರ್ಯನಿರತನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ,
Kannada BSI Bible 2016
ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವದಕ್ಕೆ ಒಪ್ಪಿದನು. ದಾವೀದನು ನೇಮಕವಾದ ದಿನಗಳು ಮುಗಿಯುವ ಮೊದಲೇ
Kannada Bible (KNCL) BSI 2016
ಸೇವಕರು ದಾವೀದನಿಗೆ ಹಾಗೆಯೇ ತಿಳಿಸಿದಾಗ ಅರಸನ ಅಳಿಯನಾಗಲು ಅವನು ಸಮ್ಮತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ, ಅರಸನಿಗೆ ಅಳಿಯನಾಗುವುದು ಅವನಿಗೆ ಚೆನ್ನಾಗಿ ಕಾಣಿಸಿತು.