1 Samuel 18:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಮತ್ತು ಅವನ ಜನರು ಫಿಲಿಷ್ಟಿಯರೊಂದಿಗೆ ಹೋರಾಡಲು ಹೋದರು. ಅವರು ಇನ್ನೂರು ಜನ ಫಿಲಿಷ್ಟಿಯರನ್ನು ಕೊಂದು ಅವರ ಮುಂದೊಗಲುಗಳನ್ನು ತೆಗೆದುಕೊಂಡು ಬಂದು ರಾಜನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಸಂಪೂರ್ಣವಾಗಿ ಸೌಲನಿಗೆ ಒಪ್ಪಿಸಿದರು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ದಾವೀದನಿಗೆ ಮದುವೆ ಮಾಡಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.
Kannada BSI Bible 2016
ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ ಅಲ್ಲಿನ ಇನ್ನೂರು ಜನರನ್ನು ಕೊಂದು ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗುವದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು;
Kannada Bible (KNCL) BSI 2016
ನೇಮಕವಾದ ದಿನಗಳು ಮುಗಿಯುವ ಮೊದಲೇ ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಮಂದಿಯನ್ನು ಕೊಂದು, ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗಲು ಬೇಕಾಗಿದ್ದ ಲೆಕ್ಕಾಚಾರವನ್ನು ಪೂರ್ತಿ ಆಗಿ ಒಪ್ಪಿಸಿದನು. ಆಗ ಸೌಲನು ತನ್ನ ಮಗಳು ಮೀಕಲಳನ್ನು ದಾವೀದನಿಗೆ ಮದುವೆಮಾಡಿಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೇಮಿಸಿದ ದಿವಸಗಳು ಈಡೇರುವುದಕ್ಕಿಂತ ಮುಂಚೆ ದಾವೀದನು ಎದ್ದು, ತನ್ನ ಜನರನ್ನು ಕರಕೊಂಡು ಹೋಗಿ, ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಹೊಡೆದು, ಅವರ ಮುಂದೊಗಲುಗಳನ್ನು ತಂದು, ತಾನು ಅರಸನಿಗೆ ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಪುತ್ರಿಯಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.