1 Samuel 19:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ಸೌಲನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಸರಿದುಕೊಂಡಿದ್ದರಿಂದ ಈಟಿಯು ಗೋಡೆಗೆ ನಾಟಿಕೊಂಡಿತು. ದಾವೀದನು ಆ ದಿನ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
Kannada BSI Bible 2016
ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
Kannada Bible (KNCL) BSI 2016
ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಕಚ್ಚಿಕೊಳ್ಳುವಂತೆ ತಿವಿಯಬೇಕೆಂದು ಅವನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಹುಡುಕಿದನು. ಆದರೆ ದಾವೀದನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಅವನ ಈಟಿಯು ಗೋಡೆಯಲ್ಲಿ ಹತ್ತಿಕೊಳ್ಳುವಂತೆ ಹೊಡೆದನು. ದಾವೀದನು ಓಡಿಹೋಗಿ ಆ ರಾತ್ರಿಯಲ್ಲಿ ತಪ್ಪಿಸಿಕೊಂಡನು.