1 Samuel 19:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ದಾವೀದನನ್ನು ಬಂಧಿಸಿ ಕರೆತರಲು ಸಂದೇಶಕರನ್ನು ಕಳುಹಿಸಿದನು. ಆದರೆ ಮೀಕಲಳು, “ದಾವೀದನಿಗೆ ಹುಷಾರಿಲ್ಲ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು.
Kannada BSI Bible 2016
ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನ ದೂತರು ದಾವೀದನನ್ನು ಹಿಡಿಯುವದಕ್ಕೆ ಬಂದಾಗ ಅವಳು - ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿ ಕಳುಹಿಸಿದಳು.
Kannada Bible (KNCL) BSI 2016
ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು, “ಅವರಿಗೆ ಮೈ ಚೆನ್ನಾಗಿಲ್ಲ,” ಎಂದು ಹೇಳಿ ಕಳುಹಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದಾಗ, ಮೀಕಲಳು ಅವರಿಗೆ, “ಅವನು ಖಾಯಿಲೆಯಲ್ಲಿದ್ದಾನೆ,” ಎಂದಳು.