1 Samuel 19:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂದೇಶಕರು ಹೋಗಿ ಸೌಲನಿಗೆ ವಿಷಯ ತಿಳಿಸಿದಾಗ ಅವನು ದಾವೀದನನ್ನು ನೋಡಲು ಮತ್ತೆ ಸಂದೇಶಕರನ್ನು ಕಳುಹಿಸಿದನು. ಸೌಲನು ಅವರಿಗೆ, “ದಾವೀದನನ್ನು ನನ್ನ ಬಳಿಗೆ ಕರೆತನ್ನಿ! ಹಾಸಿಗೆಯ ಮೇಲೆ ಮಲಗಿರುವ ಅವನನ್ನು ಹಾಸಿಗೆಯ ಸಮೇತವಾಗಿ ತೆಗೆದುಕೊಂಡು ಬನ್ನಿ! ನಾನು ಅವನನ್ನು ಕೊಲ್ಲುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.
Kannada BSI Bible 2016
ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ತಿರಿಗಿ ತನ್ನ ಆಳುಗಳಿಗೆ - ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ತನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದು ಹಾಕುತ್ತೇನೆ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಸೌಲನು ಪುನಃ ತನ್ನ ಆಳುಗಳಿಗೆ, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿ, ಅವನನ್ನು ಕೊಂದುಹಾಕುತ್ತೇನೆ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿರುಗಿ ಸೌಲನು ದಾವೀದನನ್ನು ನೋಡುವುದಕ್ಕೋಸ್ಕರ ದೂತರನ್ನು ಕಳುಹಿಸಿ, “ಅವನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದನು.