1 Samuel 19:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ ಮೋಸ ಮಾಡಿದ್ದೇಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿಹೋದನಲ್ಲಾ!” ಎಂದು ಹೇಳಿದನು ಮೀಕಲಳು ಸೌಲನಿಗೆ, “ತಪ್ಪಿಸಿಕೊಳ್ಳಲು ತನಗೆ ಸಹಾಯ ಮಾಡದಿದ್ದರೆ ನನ್ನನ್ನು ಕೊಲ್ಲುವುದಾಗಿ ದಾವೀದನು ತಿಳಿಸಿದ!” ಎಂದು ಹೇಳಿದಳು. 31ಸಮುವೇಲನು ಸೌಲನ ಜೊತೆಯಲ್ಲಿ ಹೋದನು. ಸೌಲನು ಯೆಹೋವನನ್ನು ಆರಾಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.
Kannada BSI Bible 2016
ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಮೀಕಲಳಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ ಎನ್ನಲು ಆಕೆಯು ಅವನಿಗೆ - ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆಂದು ಅವನು ನನಗೆ ಹೇಳಿದನು ಅಂದಳು.
Kannada Bible (KNCL) BSI 2016
ಸೌಲನು ಮೀಕಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲವೆ?” ಎನ್ನಲು, ಆಕೆ ಅವನಿಗೆ, “’ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ’ ಎಂದು ಹೇಳಿದ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಮೀಕಲಳಿಗೆ, “ನೀನು ಈ ಪ್ರಕಾರ ನನಗೆ ಮೋಸಮಾಡಿ, ನನ್ನ ಶತ್ರುವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ,” ಎಂದನು. ಆಗ ಮೀಕಲಳು ಸೌಲನಿಗೆ ಉತ್ತರವಾಗಿ, “ಅವನು ನನಗೆ, ‘ನಾನು ನಿನ್ನನ್ನು ಕೊಂದು ಹಾಕುವುದು ಏಕೆ? ನನ್ನನ್ನು ಹೋಗಗೊಡಿಸು,’ ಎಂದು ಹೇಳಿದನು,” ಎಂದಳು.