1 Samuel 19:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಹತ್ತಿರಕ್ಕೆ ಓಡಿಹೋದನು. ಸೌಲನು ತನಗೆ ಮಾಡಿದ್ದನ್ನೆಲ್ಲ ದಾವೀದನು ಸಮುವೇಲನಿಗೆ ಹೇಳಿದನು. ನಂತರ ದಾವೀದನು ಮತ್ತು ಸಮುವೇಲನು ಪ್ರವಾದಿಗಳಿದ್ದ ಪಾಳೆಯಕ್ಕೆ ಹೋದರು. ದಾವೀದನು ಅಲ್ಲಿ ನೆಲೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.
Kannada BSI Bible 2016
ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಮಠದಲ್ಲಿ ವಾಸವಾಗಿದ್ದರು.
Kannada Bible (KNCL) BSI 2016
ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ದಾವೀದನು ಓಡಿಹೋಗಿ ತಪ್ಪಿಸಿಕೊಂಡು ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು, ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುಯೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.