1 Samuel 19:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನನ್ನು ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು. ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ ಮೇಲೆ ಬಂದದ್ದರಿಂದ ಅವರೂ ಪ್ರವಾದಿಸಲಾರಂಭಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.
Kannada BSI Bible 2016
ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.
Kannada Bible (KNCL) BSI 2016
ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.