1 Samuel 19:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಈ ಸುದ್ದಿಯನ್ನು ಕೇಳಿ ಇತರ ಸಂದೇಶಕರನ್ನು ಕಳುಹಿಸಿದನು. ಆದರೆ ಅವರೂ ಪ್ರವಾದಿಸಲಾರಂಭಿಸಿದರು. ಆದ್ದರಿಂದ ಸೌಲನು ಮೂರನೆಯ ಬಾರಿ ಸಂದೇಶಕರನ್ನು ಕಳುಹಿಸಿದನು, ಅವರೂ ಪ್ರವಾದಿಸಲಾರಂಭಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.
Kannada BSI Bible 2016
ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು; ಇವರೂ ಪರವಶರಾದರು. ಮೂರನೆಯ ಸಾರಿ ಇನ್ನು ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು.
Kannada Bible (KNCL) BSI 2016
ಸೌಲನಿಗೆ ಈ ವರ್ತಮಾನ ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು. ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ, ಅವನು ಬೇರೆ ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು.