1 Samuel 19:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಡೆಯದಾಗಿ ಸೌಲನೇ ರಾಮಕ್ಕೆ ಹೋದನು. ಸೇಕೂವಿನಲ್ಲಿ ಕಣದ ಬಳಿ ಇರುವ ದೊಡ್ಡ ಬಾವಿಯ ಸಮೀಪಕ್ಕೆ ಅವನು ಬಂದು, “ಸಮುವೇಲ ಮತ್ತು ದಾವೀದ ಎಲ್ಲಿದ್ದಾರೆ?” ಎಂದು ಕೇಳಿದನು. ಜನರು, “ರಾಮದ ಹತ್ತಿರವಿರುವ ಪಾಳೆಯದಲ್ಲಿದ್ದಾರೆ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು.
Kannada BSI Bible 2016
ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು ಸಮುವೇಲ ದಾವೀದರು ಎಲ್ಲಿರುತ್ತಾರೆಂದು ವಿಚಾರಿಸಲು ಜನರು - ರಾಮದ ಮಠದಲ್ಲಿದ್ದಾರೆಂದು ಉತ್ತರಕೊಟ್ಟರು.
Kannada Bible (KNCL) BSI 2016
ಆಗ ಸೌಲನು ತಾನೇ ರಾಮಾಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ಹಾಗು ದಾವೀದನು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಜನರು, “ರಾಮಾದ ಮಠದಲ್ಲಿ ಇದ್ದಾರೆ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ತಾನೇ ರಾಮಕ್ಕೆ ಹೋದನು. ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, ಸಮುಯೇಲನೂ ದಾವೀದನೂ ಎಲ್ಲಿದ್ದಾರೆ ಎಂದು ಕೇಳಿದನು. ಆಗ ಒಬ್ಬನು, “ಅವರು ರಾಮದ ನಯೋತಿನಲ್ಲಿದ್ದಾರೆ,” ಎಂದನು.