1 Samuel 19:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು. ಆದ್ದರಿಂದಲೇ ಜನರು, “ಸೌಲನೂ ಪ್ರವಾದಿಗಳಲ್ಲಿ ಒಬ್ಬನೇ?” ಎಂದು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.
Kannada BSI Bible 2016
ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಗೆ ಸೇರಿದ ಮೇಲೆ ಅವನೂ ತನ್ನ ಬಟ್ಟೆಗಳನ್ನು ತೆಗೆದು ಹಾಕಿ ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದದರಿಂದ - ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆಯುಂಟಾಯಿತು.
Kannada Bible (KNCL) BSI 2016
ಅಲ್ಲಿಗೆ ಸೇರಿದ ಮೇಲೆ, ಅವನೂ ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದುದರಿಂದ “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೋ?” ಎಂಬ ಗಾದೆಯುಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ, ತಾನೂ ಹಾಗೆಯೇ ಸಮುಯೇಲನ ಮುಂದೆ ಪ್ರವಾದಿಸಿದನು. ಆ ದಿನ ಹಗಲೆಲ್ಲವೂ, ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದ್ದರಿಂದ, “ಸೌಲನು ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ?” ಎಂಬ ಮಾತು ಪ್ರಚಲಿತವಾಯಿತು.