1 Samuel 19:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.
Kannada BSI Bible 2016
ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ - ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯಮಾಡದಿರಲಿ; ಅವನು ನಿನಗೆ ದ್ರೋಹಮಾಡಲಿಲ್ಲ; ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.
Kannada Bible (KNCL) BSI 2016
ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಯೋನಾತಾನನು ತನ್ನ ತಂದೆ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೆಯದನ್ನು ಮಾತನಾಡಿ ಅವನಿಗೆ, “ಅರಸನು ತನ್ನ ಸೇವಕನಾದ ದಾವೀದನಿಗೆ ದ್ರೋಹಮಾಡದೆ ಇರಲಿ. ಏಕೆಂದರೆ ಅವನು ನಿನಗೆ ದ್ರೋಹಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.