1 Samuel 19:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.
Kannada BSI Bible 2016
ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.
Kannada Bible (KNCL) BSI 2016
ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋನಾತಾನನು ದಾವೀದನನ್ನು ಕರೆದು, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ, ದಾವೀದನನ್ನು ಸೌಲನ ಬಳಿಗೆ ಕರೆತಂದನು. ಅವನು ಮುಂಚಿನ ಹಾಗೆಯೇ ಸೌಲನ ಬಳಿಯಲ್ಲಿ ಇದ್ದನು.