1 Samuel 19:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನಿಂದ ಬಂದ ದುರಾತ್ಮವು ಸೌಲನ ಮೈಮೇಲೆ ಬಂದಿತು. ಸೌಲನು ತನ್ನ ಮನೆಯಲ್ಲಿ ಕುಳಿತಿದ್ದನು. ಸೌಲನ ಈಟಿಯು ಅವನ ಕೈಯಲ್ಲಿಯೇ ಇದ್ದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.
Kannada BSI Bible 2016
ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕೂತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.
Kannada Bible (KNCL) BSI 2016
ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಆಗ ಸರ್ವೇಶ್ವರನಿಂದ ಬಂದ ದುರಾತ್ಮವೊಂದು ಅವನನ್ನು ಆವರಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು, ತನ್ನ ಮನೆಯೊಳಗೆ ಕುಳಿತಿರುವಾಗ, ಯೆಹೋವ ದೇವರಿಂದ ಕಳುಹಿಸಲಾದ ದುರಾತ್ಮವು ಅವನ ಮೇಲೆ ಬಂತು. ದಾವೀದನು ತನ್ನ ಕೈಯಿಂದ ಕಿನ್ನರಿ ಬಾರಿಸಿದನು.