1 Samuel 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
Kannada BSI Bible 2016
ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
Kannada Bible (KNCL) BSI 2016
ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.