1 Samuel 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”
Kannada BSI Bible 2016
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.
Kannada Bible (KNCL) BSI 2016
ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”