1 Samuel 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಕಾನ ಮತ್ತು ಅವನ ಕುಟುಂಬದವರು ರಾಮಾತದಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಬಾಲಕನು ಶೀಲೋವಿನಲ್ಲಿಯೇ ಉಳಿದುಕೊಂಡನು ಮತ್ತು ಯಾಜಕನಾದ ಏಲಿಯ ಮಾರ್ಗದರ್ಶನದಲ್ಲಿ ಯೆಹೋವನ ಸೇವೆಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
Kannada BSI Bible 2016
ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನನ್ನು ಸೇವಿಸುತ್ತಿದ್ದನು.
Kannada Bible (KNCL) BSI 2016
ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು. ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಯೆಹೋವ ದೇವರ ಸೇವೆ ಮಾಡುತ್ತಿದ್ದನು.