1 Samuel 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಜನರೊಡನೆ ಯಾವ ರೀತಿ ವರ್ತಿಸಬೇಕು ಎಂಬುದನ್ನು ಅವರು ಲಕ್ಷಿಸುತ್ತಿರಲಿಲ್ಲ. ಯಾಜಕರು ಜನರಿಗಾಗಿ ಮಾಡಬೇಕಾದ ಕಾರ್ಯವೆಂದರೆ: ಒಬ್ಬ ವ್ಯಕ್ತಿಯು ಪ್ರತಿಸಲ ಯಜ್ಞವನ್ನರ್ಪಿಸಲು ಬಂದಾಗ ಯಾಜಕರು ಯಜ್ಞಮಾಂಸವನ್ನು ಒಂದು ಮಡಕೆಯಲ್ಲಿ ಬೇಯಿಸಬೇಕು. ಯಾಜಕರ ಸೇವಕನು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು.
Kannada BSI Bible 2016
ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞವನ್ನರ್ಪಿಸುವದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ - ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬಂದು
Kannada Bible (KNCL) BSI 2016
ಬಲಿಯರ್ಪಿಸುವುದಕ್ಕೆ ಬಂದ ಜನರಲ್ಲೂ ಯಾಜಕರಾದ ಇವರು ಸರಿಯಾಗಿ ವರ್ತಿಸುತ್ತಿರಲಿಲ್ಲ; ಬಲಿಮಾಂಸ ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲ ಹಿಡಿದು ಬರುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು,