1 Samuel 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರ ಸೇವಕನು ತ್ರಿಶೂಲವನ್ನು ಕೊಪ್ಪರಿಗೆಯಲ್ಲಾಗಲಿ ತಪ್ಪಲೆಯಲ್ಲಾಗಲಿ ಗಡಿಗೆಯಲ್ಲಾಗಲಿ ಭಾಂಡದಲ್ಲಾಗಲಿ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.
Kannada BSI Bible 2016
ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೋಸ್ಕರ ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.
Kannada Bible (KNCL) BSI 2016
ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ತಪ್ಪಲೆಯಲ್ಲಾಗಲಿ, ಪಾತ್ರೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವುದನ್ನೆಲ್ಲಾ ಯಾಜಕನು ತನಗೆ ತೆಗೆದುಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲರಿಗೆ ಮಾಡಿದರು.