1 Samuel 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಏಲಿಯ ಮಕ್ಕಳು ಈ ರೀತಿ ಮಾಡುತ್ತಿರಲಿಲ್ಲ. ಯಜ್ಞವೇದಿಕೆಯ ಮೇಲೆ ಕೊಬ್ಬನ್ನು ಹೋಮ ಮಾಡುವುದಕ್ಕಿಂತ ಮೊದಲೇ ಅವರ ಸೇವಕರು ಯಜ್ಞಗಳನ್ನು ಅರ್ಪಿಸುವ ಜನರ ಬಳಿಗೆ ಹೋಗುತ್ತಿದ್ದರು. ಯಾಜಕನ ಸೇವಕನು, “ಯಾಜಕನಿಗೆ ಕರಿದು ಕೊಡಲು ಸ್ವಲ್ಪ ಮಾಂಸವನ್ನು ಕೊಡಿ. ಬೇಯಿಸಿದ ಮಾಂಸವನ್ನು ಯಾಜಕನು ನಿಮ್ಮಿಂದ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಹೇಳುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.
Kannada BSI Bible 2016
ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ - ಯಾಜಕನಿಗೋಸ್ಕರ ಕರಿಯತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವದಿಲ್ಲ; ಅವನಿಗೆ ಹಸೀ ಮಾಂಸವೇ ಬೇಕು ಅನ್ನುವನು.
Kannada Bible (KNCL) BSI 2016
ಇದಲ್ಲದೆ, ಕೊಬ್ಬನ್ನು ಹೋಮಮಾಡುವುದಕ್ಕೆ ಮುಂಚೆಯೇ ಯಾಜಕನ ಆಳು ಬಂದು ಬಲಿಯರ್ಪಿಸುತ್ತಿದ್ದವನಿಗೆ, “ಹುರಿಯತಕ್ಕ ಮಾಂಸವನ್ನು ಯಾಜಕನಿಗೆ ಕೊಡು; ನೀವು ಬೇಯಿಸಿದ ಮಾಂಸವನ್ನು ಅವರು ತೆಗೆದುಕೊಳ್ಳುವುದಿಲ್ಲ; ಅವರಿಗೆ ಹಸಿ ಮಾಂಸವೇ ಬೇಕು,” ಎನ್ನುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಕೊಬ್ಬನ್ನು ಬಲಿ ಅರ್ಪಿಸುವುದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು, ಬಲಿಯನ್ನು ಅರ್ಪಿಸುವವನ ಸಂಗಡ, “ಯಾಜಕನಿಗೆ ಸುಡುವುದಕ್ಕೆ ಮಾಂಸವನ್ನು ಕೊಡು. ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತೆಗೆದುಕೊಳ್ಳುವುದಿಲ್ಲ. ಅದು ಹಸಿಯಾಗಿರಬೇಕು,” ಎನ್ನುತ್ತಿದ್ದನು.