1 Samuel 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮ ಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.
Kannada BSI Bible 2016
ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು.
Kannada Bible (KNCL) BSI 2016
ಬಲಿಯರ್ಪಿಸುತ್ತಿದ್ದವನು ಅವನಿಗೆ, “ಮೊದಲು ಕೊಬ್ಬನ್ನು ಹೋಮಮಾಡೋಣ; ಅನಂತರ ನಿನಗೆ ಬೇಕಾದುದನ್ನು ತೆಗೆದುಕೊಳ್ಳುವಿಯಂತೆ,” ಎಂದು ಹೇಳಿದಾಗ, “ಕೂಡದು, ಈಗಲೇ ಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುತ್ತೇನೆ,” ಎಂದು ಪೀಡಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು.