1 Samuel 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.
Kannada BSI Bible 2016
ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.
Kannada Bible (KNCL) BSI 2016
ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.