1 Samuel 2:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು. ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.
Kannada BSI Bible 2016
ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು.
Kannada Bible (KNCL) BSI 2016
ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಏಲಿಯು ಎಲ್ಕಾನನನ್ನೂ, ಅವನ ಹೆಂಡತಿಯನ್ನೂ, “ಯೆಹೋವ ದೇವರಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ಯೆಹೋವ ದೇವರು ನಿನಗೆ ಬೇರೆ ಮಕ್ಕಳನ್ನು ದಯಪಾಲಿಸಲಿ,” ಎಂದು ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರುಗಿ ತಮ್ಮ ಮನೆಗೆ ಹಿಂದಿರುಗುತ್ತಿದ್ದರು.