1 Samuel 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.
Kannada BSI Bible 2016
ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಕಟಾಕ್ಷಿಸಿದದರಿಂದ ಹನ್ನಳಿಗೆ ಮೂರು ಮಂದಿ ಗಂಡು ಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ದೊಡ್ಡವನಾದನು.
Kannada Bible (KNCL) BSI 2016
ಸರ್ವೇಶ್ವರನ ಅನುಗ್ರಹ ಹನ್ನಳಿಗೆ ಲಭಿಸಿತು. ಆಕೆಗೆ ಮೂರು ಗಂಡು, ಇಬ್ಬರು ಹೆಣ್ಣು ಮಕ್ಕಳಾದುವು. ಬಾಲಕ ಸಮುವೇಲನು ಸರ್ವೇಶ್ವರನ ಸನ್ನಿಧಿಯಲ್ಲಿ ಬೆಳೆದು ದೊಡ್ಡವನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಯೆಹೋವ ದೇವರು ಹನ್ನಳಿಗೆ ಕೃಪೆ ತೋರಿಸಿದ್ದರಿಂದ, ಅವಳು ಗರ್ಭಧರಿಸಿ ಮೂವರು ಪುತ್ರರನ್ನೂ, ಇಬ್ಬರು ಪುತ್ರಿಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುಯೇಲನು ಯೆಹೋವ ದೇವರ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.