1 Samuel 2:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣೀರಿಗೂ ಮತ್ತು ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹಾರವಾಗುವರು.
Kannada BSI Bible 2016
ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದುಹಾಕದೆ ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಗೇಡಿಗೂ ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹೃತರಾಗುವರು.
Kannada Bible (KNCL) BSI 2016
ನನ್ನ ಸಾನ್ನಿಧ್ಯ ಸೇವೆಯಿಂದ ನಿಮ್ಮಲ್ಲಿ ಒಬ್ಬನನ್ನು ಉಳಿಸಿ ಮಿಕ್ಕವರನ್ನು ತೆಗೆದುಹಾಕುವೆನು. ಉಳಿಸಲಾದವನು ಕೂಡ ಕುರುಡನಾಗಿ ನಿನ್ನ ವ್ಯಥೆಗೆ ಕಾರಣನಾಗುವನು. ನಿನ್ನ ಸಂತಾನದವರೆಲ್ಲರು ಕತ್ತಿಯಿಂದ ಸಾಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಲಿಪೀಠದ ಸೇವೆಯಿಂದ ನಾನು ತೆಗೆದು ಬಿಡದ ಮನುಷ್ಯನು, ನಿನ್ನ ಕಣ್ಣುಗಳನ್ನು ಕುಂದಿಸಿ, ನಿನ್ನ ಹೃದಯವನ್ನು ವೇದನೆ ಪಡಿಸುವುದಕ್ಕೆ ಇರುವನು. ನಿನ್ನ ಮನೆಯ ಸಂತತಿಯವರೆಲ್ಲಾ ಯೌವನ ಪ್ರಾಯದಲ್ಲಿಯೇ ಖಡ್ಗದಿಂದ ಸಾಯುವರು.