1 Samuel 2:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಈ ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಈ ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’
Kannada BSI Bible 2016
ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.
Kannada Bible (KNCL) BSI 2016
ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.