1 Samuel 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದ ಜನರು ಅನ್ನಕ್ಕಾಗಿ ದುಡಿಯಬೇಕಾಗುವುದು. ಹಿಂದೆ ಆಹಾರಕ್ಕಾಗಿ ಹಸಿದಿದ್ದವರು ಇಂದು ತಿಂದು ಕೊಬ್ಬಿರುವರು! ಬಂಜೆಗೆ ಈಗ ಏಳು ಜನ ಮಕ್ಕಳಿರುವರು. ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು ಏಕೆಂದರೆ ಅವಳ ಮಕ್ಕಳೆಲ್ಲ ಸತ್ತುಹೋಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.
Kannada BSI Bible 2016
ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಟ್ಟೆತುಂಬಾ ಉಣ್ಣುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ. ಹಸಿವುಗೊಂಡವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.
Kannada Bible (KNCL) BSI 2016
ಉಂಡು ಸುಖದಿಂದಿರುವರು ಹಸಿವುಗೊಂಡವರು ಹೊಟ್ಟೆಗಾಗಿ ಕೂಲಿಮಾಡುತ್ತಿಹರು ತೃಪ್ತರಿದ್ದವರು. ಬಂಜೆ ಹೆರುವಳು ಆರೇಳು ಮಕ್ಕಳನು ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೃಪ್ತಿಪಟ್ಟವರು ಆಹಾರಕ್ಕಾಗಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಹಸಿದವರು ಇನ್ನು ಮುಂದೆ ಹಸಿಯರು. ಬಂಜೆಯಾದವಳು ಏಳುಮಂದಿ ಮಕ್ಕಳನ್ನು ಹೆತ್ತಳು. ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನಳಾದಳು.