1 Samuel 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.
Kannada BSI Bible 2016
ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.
Kannada Bible (KNCL) BSI 2016
ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.