1 Samuel 20:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,
Kannada BSI Bible 2016
ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ -
Kannada Bible (KNCL) BSI 2016
ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು.