1 Samuel 20:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆಯ ಔತಣ. ನಿನ್ನ ಸ್ಥಳವು ಖಾಲಿಯಾಗಿರುವುದನ್ನು ನನ್ನ ತಂದೆಯು ಕಂಡು, ನೀನು ಹೊರಟುಹೋಗಿರುವೆ ಎಂದು ತಿಳಿದುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
Kannada BSI Bible 2016
ಯೋನಾತಾನನು ದಾವೀದನಿಗೆ--ನಾಳೆ ಅಮಾ ವಾಸ್ಯೆ; ನೀನು ಅಲ್ಲಿ ಇಲ್ಲದಿರುವದರಿಂದ ನಿನ್ನ ಸ್ಥಳವು ಬರಿದಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನು ದಾವೀದನಿಗೆ - ನಾಳೆ ಶುದ್ಧಪಾಡ್ಯವು; ನಿನ್ನ ಸ್ಥಳವು ಬರಿದಾಗಿರುವದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
Kannada Bible (KNCL) BSI 2016
ಯೋನಾತಾನನು ದಾವೀದನಿಗೆ, “ನಾಳೆಶುದ್ಧಪಾಡ್ಯಮಿ; ನಿನ್ನ ಸ್ಥಳ ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ; ನೀನು ಅಲ್ಲಿ ಇಲ್ಲದಿರುವುದರಿಂದ ನಿನ್ನ ಸ್ಥಳವು ಬರಿದಾಗಿರುವುದು.