1 Samuel 20:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ.
Kannada BSI Bible 2016
ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳನ್ನು ತರುವದಕ್ಕಾಗಿ ನನ್ನ ಆಳನ್ನು ಕಳುಹಿಸುವೆನು. ನಾನು ಅವನಿಗೆ - ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ಹೇಳಿದರೆ ನೀನು ಬಾ; ಯೆಹೋವನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವಿ.
Kannada Bible (KNCL) BSI 2016
ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ; ಸರ್ವೇಶ್ವರನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಹುಡುಗನನ್ನು ಕಳುಹಿಸಿ, ‘ಆ ಬಾಣಗಳನ್ನು ಹುಡುಕಿಕೊಂಡು ಬಾ,’ ಎಂದು ಹೇಳುವೆನು. ‘ಆ ಬಾಣಗಳು ನಿನಗೆ ಈಚೆ ಬಿದ್ದಿವೆ, ಅವುಗಳನ್ನು ತೆಗೆದುಕೊಂಡು ಬಾ,’ ಎಂದು ನಾನು ಹುಡುಗನಿಗೆ ಹೇಳಿದರೆ, ನೀನು ಬರಬಹುದು. ಏಕೆಂದರೆ ಯೆಹೋವ ದೇವರಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವುದು.