1 Samuel 20:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ತಾನು ಯಾವಾಗಲೂ ಕುಳಿತುಕೊಳ್ಳುವಂತೆ ಗೋಡೆಯ ಸಮೀಪದಲ್ಲಿ ಕುಳಿತುಕೊಂಡನು. ಯೋನಾತಾನನು ಸೌಲನ ಎದುರಾಗಿ ಕುಳಿತುಕೊಂಡನು. ಸೌಲನ ಪಕ್ಕದಲ್ಲಿ ಅಬ್ನೇರನು ಕುಳಿತುಕೊಂಡನು. ಆದರೆ ದಾವೀದನ ಸ್ಥಳವು ಖಾಲಿಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,
Kannada BSI Bible 2016
ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಶುದ್ಧಪಾಡ್ಯದ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕೂತುಕೊಂಡನು. ಅವನ ಎದುರಾಗಿ ಯೋನಾತಾನನೂ ಅವನ ಪಾರ್ಶ್ವದಲ್ಲಿ ಅಬ್ನೇರನೂ ಕೂತುಕೊಂಡರು. ಸೌಲನು ದಾವೀದನ ಸ್ಥಳವು ಬರಿದಾಗಿರುವದನ್ನು ಕಂಡರೂ
Kannada Bible (KNCL) BSI 2016
ಅರಸನು ಶುದ್ಧಪಾಡ್ಯಮಿಯ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅವನ ಪಾರ್ಶ್ವದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳ ಬರಿದಾಗಿರುವುದನ್ನು ಕಂಡರೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ, ಯೋನಾತಾನನು ಎದ್ದನು ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು. ದಾವೀದನು ಇರುವ ಸ್ಥಳವು ಬರಿದಾಗಿತ್ತು.