1 Samuel 20:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.
Kannada BSI Bible 2016
ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು.
Kannada Bible (KNCL) BSI 2016
ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು.