1 Samuel 20:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.
Kannada BSI Bible 2016
ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ; ಆದದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು ಅಂದನು.
Kannada Bible (KNCL) BSI 2016
ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.