1 Samuel 20:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋನಾತಾನನು ಬಹಳ ಕೋಪಗೊಂಡು ಊಟದ ಮೇಜನ್ನು ಬಿಟ್ಟುಹೋದನು. ಯೋನಾತಾನನು ತನ್ನ ತಂದೆಯ ಮೇಲೆ ಬಹಳವಾಗಿ ಬೇಸರಗೊಂಡಿದ್ದರಿಂದ ಮತ್ತು ಕೋಪವುಳ್ಳವನಾಗಿದ್ದರಿಂದ ಎರಡನೆ ದಿನ ಔತಣದಲ್ಲಿ ಅವನು ಏನನ್ನೂ ತಿನ್ನಲಿಲ್ಲ. ಸೌಲನು ದಾವೀದನಿಗೆ ಅವಮಾನ ಮಾಡಿದ್ದರಿಂದ ಯೋನಾತಾನನು ಕೋಪಗೊಂಡಿದ್ದನು. ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದುದರಿಂದ ಯೋನಾತಾನನು ದುಃಖಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.
Kannada BSI Bible 2016
ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು; ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟ ಮಾಡಲೇ ಇಲ್ಲ.
Kannada Bible (KNCL) BSI 2016
ಅವನು ಬಲುಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆ, ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟಮಾಡಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋನಾತಾನನು ಕೋಪದಿಂದ ಉರಿಗೊಂಡು ಮೇಜಿನಿಂದ ಎದ್ದು ಹೋದನು. ಹಬ್ಬದ ಎರಡನೆಯ ದಿನವಾಗಿದ್ದ ಅಂದು ಅವನು ಊಟ ಮಾಡಲಿಲ್ಲ. ಏಕೆಂದರೆ ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದರಿಂದ, ಅವನಿಗೋಸ್ಕರ ವ್ಯಥೆಪಟ್ಟನು.