1 Samuel 20:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನಾತಾನನು ತನ್ನ ಬಿಲ್ಲು ಮತ್ತು ಬಾಣಗಳನ್ನು ಬಾಲಕನಿಗೆ ಕೊಟ್ಟನು. ನಂತರ ಯೋನಾತಾನನು ಆ ಬಾಲಕನಿಗೆ, “ಪಟ್ಟಣಕ್ಕೆ ಹಿಂದಿರುಗಿ ಹೋಗು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು.
Kannada BSI Bible 2016
ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು ಎಂದು ಹೇಳಿದನು.
Kannada Bible (KNCL) BSI 2016
ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು, “ಇವುಗಳನ್ನು ಊರಿಗೆ ತೆಗೆದುಕೊಂಡು ಹೋಗು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋನಾತಾನನು ತನ್ನ ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ, “ಅವುಗಳನ್ನು ಪಟ್ಟಣದೊಳಕ್ಕೆ ತೆಗೆದುಕೊಂಡು ಹೋಗು,” ಎಂದನು.