1 Samuel 20:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
Kannada BSI Bible 2016
ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಡುಗನು ಹೋಗುತ್ತಲೆ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು; ದಾವೀದನು ಬಹಳವಾಗಿ ಅತ್ತನು.
Kannada Bible (KNCL) BSI 2016
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.