1 Samuel 20:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದಾವೀದನು, “ನಾಳೆ ಅಮಾವಾಸ್ಯೆ ಹಬ್ಬ, ನಾನು ರಾಜನ ಜೊತೆಯಲ್ಲಿ ಊಟಮಾಡಬೇಕಾಗಿದೆ. ಆದರೆ ನಾನು ಈಗಲೇ ಹೋಗಿ ಸಂಜೆಯವರೆಗೆ ಹೊಲದಲ್ಲಿ ಅಡಗಿಕೊಳ್ಳಲು ಅವಕಾಶ ಮಾಡಿಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
Kannada BSI Bible 2016
ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
Kannada Bible (KNCL) BSI 2016
ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು.