1 Samuel 20:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇಲ್ಲದಿರುವುದನ್ನು ನಿಮ್ಮ ತಂದೆಯು ಗಮನಿಸಿದರೆ ಅವನಿಗೆ, ‘ದಾವೀದನು ಬೆತ್ಲೆಹೇಮಿನ ತನ್ನ ಮನೆಗೆ ಹೋಗಲು ಬಯಸಿದನು. ಅವನ ಕುಟುಂಬದವರು ಅಲ್ಲಿ ವಾರ್ಷಿಕಯಜ್ಞದ ಔತಣವನ್ನು ಏರ್ಪಡಿಸಿದ್ದಾರೆ. ಬೆತ್ಲೆಹೇಮಿಗೆ ಹೋಗಿ ತನ್ನ ಕುಟುಂಬದವರ ಜೊತೆಯಿರಲು ಅವಕಾಶ ಕೊಡಬೇಕೆಂದು ದಾವೀದನು ನನ್ನನ್ನು ಕೇಳಿಕೊಂಡನು’ ಎಂದು ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.
Kannada BSI Bible 2016
ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ತಂದೆಯು ನನ್ನನ್ನು ಕುರಿತು ವಿಚಾರಮಾಡಿದರೆ ನೀನು - ದಾವೀದನು ತನ್ನ ಊರಾದ ಬೇತ್ಲೆಹೇವಿುಗೆ ಹೋಗಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕಯಜ್ಞ ಮಾಡುತ್ತಾರಂತೆ ಎಂದು ಹೇಳು.
Kannada Bible (KNCL) BSI 2016
ನಿನ್ನ ತಂದೆ ನನ್ನನ್ನು ಕುರಿತು ವಿಚಾರಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೆತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕ ಬಲಿದಾನ ಮಾಡುತ್ತಾರಂತೆ,’ ಎಂದು ಹೇಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವುದನ್ನು ಕಂಡು, ಶ್ರದ್ಧೆಯಿಂದ ವಿಚಾರಿಸಿ ಅವನು ಎಲ್ಲಿ? ಎಂದು ಕೇಳಿದರೆ, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಏಕೆಂದರೆ ತನ್ನ ಸಮಸ್ತ ಕುಟುಂಬಕ್ಕೋಸ್ಕರ ವರುಷದ ಯಜ್ಞ ಮಾಡುತ್ತಾರೆ,’ ಎಂದು ಹೇಳು.