1 Samuel 20:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ತಂದೆಯು, ‘ಒಳ್ಳೆಯದಾಯಿತು’ ಎಂದರೆ ನಾನು ಬದುಕಿದೆ. ಆದರೆ ನಿನ್ನ ತಂದೆಯು ಕೋಪಗೊಂಡರೆ ಅವನು ನನಗೆ ಕೇಡುಮಾಡಲು ಬಯಸಿದ್ದಾನೆಂದು ತಿಳಿದುಕೋ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.
Kannada BSI Bible 2016
ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆಗಲಿ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆಂದು ತಿಳಿದುಕೋ.
Kannada Bible (KNCL) BSI 2016
ಅವರು ‘ಹಾಗೆಯೇ ಆಗಲಿ’ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವರಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು, ‘ಒಳ್ಳೆಯದು,’ ಎಂದು ಹೇಳಿದರೆ, ನಿನ್ನ ಸೇವಕನಿಗೆ ಸಮಾಧಾನವಾಗಿರುವುದು. ಅವನು ಬಹಳ ಕೋಪ ಮಾಡಿದರೆ, ಅವನಿಂದ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.