1 Samuel 20:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನಾತಾನನು, “ಇಲ್ಲ, ಎಂದೆಂದಿಗೂ ಇಲ್ಲ! ನನ್ನ ತಂದೆಯು ನಿನಗೆ ಕೇಡು ಮಾಡುವುದಕ್ಕಾಗಿ ಉಪಾಯ ಮಾಡುತ್ತಿರುವುದು ನನಗೆ ತಿಳಿದುಬಂದರೆ ನಾನು ನಿನ್ನನ್ನು ಎಚ್ಚರಿಸುತ್ತೇನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನು ಅವನಿಗೆ, “ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?” ಅಂದನು.
Kannada BSI Bible 2016
ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನು ಅವನಿಗೆ - ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುವೆನೋ ಅಂದನು.
Kannada Bible (KNCL) BSI 2016
ಯೋನಾತಾನನು ಅವನಿಗೆ, “ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ನಾನು ತಿಳಿಸದಿರುವೆನೇ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋನಾತಾನನು, “ಅದು ನಿನಗೆ ದೂರವಾಗಿರಲಿ. ಏಕೆಂದರೆ ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ, ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ?” ಎಂದನು.