1 Samuel 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ದಾವೀದನು ಹೊರಟುಹೋದನು. ಯೋನಾತಾನನು ಪಟ್ಟಣಕ್ಕೆ ಹಿಂದಿರುಗಿದನು. ದಾವೀದನು ನೋಬ್ ಎಂಬ ಪಟ್ಟಣದ ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು. ಅಹೀಮೆಲೆಕನು ದಾವೀದನನ್ನು ಸಂಧಿಸಲು ಹೊರಗೆ ಬಂದನು. ಅಹೀಮೆಲೆಕನು ಭಯದಿಂದ ನಡುಗುತ್ತಿದ್ದನು. ಅಹೀಮೆಲೆಕನು ದಾವೀದನಿಗೆ, “ನೀನು ಒಬ್ಬಂಟಿಗನಾಗಿ ಬಂದಿರುವುದೇಕೆ? ಬೇರೆ ಯಾವ ವ್ಯಕ್ತಿಯೂ ನಿನ್ನ ಜೊತೆಯಲ್ಲಿಲ್ಲದಿರುವುದೇಕೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.
Kannada BSI Bible 2016
ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು - ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ! ನೀನು ಒಬ್ಬನೇ ಬಂದದ್ದೇಕೆ ಎಂದು ಅವನನ್ನು ಕೇಳಲು ಅವನು -
Kannada Bible (KNCL) BSI 2016
ದಾವೀದನು ನೋಬ್ ಊರಲ್ಲಿದ್ದ ಯಾಜಕ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡನು. “ನಿಮ್ಮ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ; ನೀವು ಒಬ್ಬರೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ನೋಬಿನಲ್ಲಿರುವ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ, “ಒಬ್ಬರೂ ನಿನ್ನ ಸಂಗಡ ಬಾರದೆ, ನೀನು ಒಂಟಿಯಾಗಿ ಬಂದದ್ದೇನು?” ಎಂದು ಅವನನ್ನು ಕೇಳಿದನು.