1 Samuel 21:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು!” ಎಂಬ ಈ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು.
Kannada BSI Bible 2016
ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೀಷನ ಸೇವಕರು - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂಬದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೋ? ಎಂದು ಮಾತಾಡಿಕೊಂಡರು.
Kannada Bible (KNCL) BSI 2016
ಆಕೀಷನ ಸೇವಕರು, “’ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನು ಕೊಂದನು ಹತ್ತುಸಾವಿರಗಟ್ಟಳೆ’ ಎಂಬುದಾಗಿ ಮಹಿಳೆಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೇ?’ ಎಂದು ಮಾತಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”