1 Samuel 21:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದಾವೀದನು ಆಕೀಷನ ಮತ್ತು ಅವನ ಅಧಿಕಾರಿಗಳ ಎದುರಿನಲ್ಲಿ ಹುಚ್ಚನಂತೆ ನಟಿಸಿದನು. ದಾವೀದನು ಅವರೊಂದಿಗೆ ಇರುವಾಗಲೆಲ್ಲ ಹುಚ್ಚನಂತೆ ವರ್ತಿಸಿದನು. ಅವನು ದ್ವಾರದ ಬಾಗಿಲುಗಳ ಮೇಲೆ ಉಗುಳಿದನು; ಅವನ ಜೊಲ್ಲು ಗಡ್ಡದವರೆಗೂ ಸುರಿಯುವಂತೆ ಮಾಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.
Kannada BSI Bible 2016
ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ ಕದಗಳನ್ನು ಕೆರೆಯುತ್ತಾ ತನ್ನನ್ನು ಹುಚ್ಚನಂತೆ ತೋರಿಸಿಕೊಂಡನು.
Kannada Bible (KNCL) BSI 2016
ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಕದಗಳ ಮೇಲೆ ಗೀಜುತ್ತಾ ತನ್ನನ್ನು ಹುಚ್ಚನಂತೆ ತೋರಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.