1 Samuel 21:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿಯಾಗಬೇಕೆಂದು ತಿಳಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.
Kannada BSI Bible 2016
ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟುಮಾಡಿ ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.
Kannada Bible (KNCL) BSI 2016
ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.