1 Samuel 21:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಯಾಜಕನಿಗೆ, “ನಾವು ಯಾವ ಹೆಂಗಸಿನೊಂದಿಗೂ ಲೈಂಗಿಕ ಸಂಬಂಧ ಹೊಂದಿಲ್ಲ. ನನ್ನ ಜನರು ಯುದ್ಧಕ್ಕೆ ಹೋಗುವಾಗಲೂ ಸಾಧಾರಣಕಾರ್ಯಕ್ಕೆ ಹೋಗುವಾಗಲೂ ತಮ್ಮ ದೇಹಗಳನ್ನು ಶುಚಿಯಾಗಿಟ್ಟುಕೊಳ್ಳುತ್ತಾರೆ. ನಮ್ಮ ಇಂದಿನ ಕಾರ್ಯವು ವಿಶೇಷವಾದ್ದರಿಂದ ನಾವು ಖಂಡಿತವಾಗಿ ಪವಿತ್ರರಾಗಿದ್ದೇವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು
Kannada BSI Bible 2016
ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಎಲ್ಲಾ ಯುದ್ಧಪ್ರಯಾಣಗಳಲ್ಲಿ ಸ್ತ್ರೀನಿಷೇಧ ಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾನುಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುವವಲ್ಲವೇ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗ ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾಗ್ರಿಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನವಂತು ಅವು ಮತ್ತಷ್ಟು ಪರಿಶುದ್ಧವಾಗಿ ಇರುತ್ತವಲ್ಲವೇ?’ ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು.