1 Samuel 21:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.
Kannada BSI Bible 2016
ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು.
Kannada Bible (KNCL) BSI 2016
ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.