1 Samuel 22:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನಾದ ಸೌಲನು ಯಾಜಕನನ್ನು ತನ್ನ ಹತ್ತಿರಕ್ಕೆ ಕರೆತರಲು ಕೆಲವು ಜನರಿಗೆ ಅಪ್ಪಣೆಕೊಟ್ಟನು. ಸೌಲನು, ಅಹೀಟೂಬನ ಮಗನಾದ ಅಹೀಮೆಲೆಕನನ್ನೂ ಅವನ ಎಲ್ಲ ಬಂಧುಗಳನ್ನೂ ಕರೆತರಲು ಅವರಿಗೆ ಹೇಳಿದನು. ಅಹೀಮೆಲೆಕನ ಬಂಧುಗಳು ನೋಬಿನಲ್ಲಿ ಯಾಜಕರಾಗಿದ್ದರು. ಅವರೆಲ್ಲ ರಾಜನ ಹತ್ತಿರಕ್ಕೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು,
Kannada BSI Bible 2016
ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು ಅರಸನು -
Kannada Bible (KNCL) BSI 2016
ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಹಾಗು ಅವನ ಕುಟುಂಬಕ್ಕೆ ಸೇರಿದ್ದ ನೋಬದ ಬೇರೆ ಎಲ್ಲಾ ಯಾಜಕರನ್ನೂ ಬರಮಾಡಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅರಸನು ಅಹೀಟೂಬನ ಮಗನಾದ ಯಾಜಕನಾಗಿರುವ ಅಹೀಮೆಲೆಕನನ್ನೂ, ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರಾದ ಸಮಸ್ತರನ್ನೂ ಕರೆಯಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು.