1 Samuel 22:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಅಹೀಮೆಲೆಕನಿಗೆ, “ಅಹೀಟೂಬನ ಮಗನೇ, ಈಗ ನನ್ನ ಮಾತನ್ನು ಕೇಳು” ಎಂದು ಹೇಳಿದನು. ಅಹೀಮೆಲೆಕನು, “ಆಗಲೀ, ಸ್ವಾಮಿ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.
Kannada BSI Bible 2016
ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕೆ ಅವನು - ಒಡೆಯಾ, ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅರಸನು, “ಅಹೀಟೂಬನ ಮಗನೇ, ನಾನು ಕೇಳುವ ಪ್ರಶ್ನೆಗೆ ಉತ್ತರಕೊಡು,” ಎಂದನು. ಅದಕ್ಕೆ ಅವನು, “ಒಡೆಯಾ, ಅಪ್ಪಣೆಯಾಗಲಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು, “ಅಹೀಟೂಬನ ಮಗನೇ, ಕೇಳು,” ಎಂದನು. ಅದಕ್ಕವನು, “ನನ್ನ ಒಡೆಯನೇ, ನಾನು ಇಲ್ಲಿದ್ದೇನೆ,” ಎಂದನು.