1 Samuel 22:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ರಾಜನು ತನ್ನ ಸಿಪಾಯಿಗಳಿಗೆ, “ನೀವು ಹೋಗಿ ಯೆಹೋವನ ಯಾಜಕರನ್ನು ಕೊಂದುಹಾಕಿ. ಅವರು ದಾವೀದನ ಪಕ್ಷ ವಹಿಸಿದ್ದಾರೆ. ದಾವೀದನು ಓಡಿ ಹೋಗುತ್ತಿರುವುದು ತಿಳಿದಿದ್ದರೂ ಅವರು ನನಗೆ ತಿಳಿಸಲಿಲ್ಲ!” ಎಂದನು. ಆದರೆ ಯೆಹೋವನ ಯಾಜಕರನ್ನು ಕೊಲ್ಲಲು ಸೈನಿಕರು ನಿರಾಕರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.
Kannada BSI Bible 2016
ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ.
Kannada Bible (KNCL) BSI 2016
ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.